ಸಾಲುಮರದ ತಿಮ್ಮಕ್ಕ ವಿಧಿವಶ..!

Fri, Nov 14, 2025


ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114)ಬೆಂಗಳೂರಿನ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ, ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಸಿಎಂ ಸಿದ್ದರಾಮಯ್ಯ ಸಂತಾಪ...

ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ‌...

Like our news?