ವಿಜಯಪುರ ಬಸ್ ನಿಲ್ದಾಣಕ್ಕೆ ನಾಮಕರಣ ಮತ್ತು ರಾಣಿ ಚೆನ್ನಮ್ಮ ಮೂರ್ತಿ ಉದ್ಘಾಟನೆಗೆ ಸಿಎಂ ಮತ್ತು ಡಿಸಿಎಂ ಗೆ ಆಹ್ವಾನ ನೀಡಿದ ಸಚಿವ ಎಂ ಡಿ ಪಾಟೀಲ್..!
ನಗರದ ಹೃದಯ ಭಾಗದಲ್ಲಿರುವ ಕೇಂದ್ರ ಬಸ್ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ” ಎಂದು ನಾಮಕರಣಗೊಳಿಸುವುದು ಹಾಗೂ ಇದೇ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಅಶ್ವಾರೂಢ ವೀರರಾಣಿ ಚೆನ್ನಮ್ಮ ಅವರ ಪುತ್ಥಳಿಯನ್ನು ಅನಾವರಣಗೊಳಿಸುವ ಸಂಬಂಧ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ ನೀಡಿದ್ದಾರೆ.
ಹೌದು ಈ ಮಹತ್ವದ ಕಾರ್ಯಕ್ರಮವನ್ನು ಹೊಸ ವರ್ಷ ಜನವರಿ ೦೯ ರಂದು ನಡೆಸಲು ನಿರ್ಧರಿಸಲಾದ ಹಿನ್ನೆಲೆಯಲ್ಲಿ ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಆಹ್ವಾನ ನೀಡಿದ್ದಾರೆ...
Sign up here to get the latest post directly to your inbox.