ವಿಜಯಪುರದಲ್ಲಿ ತಡರಾತ್ರಿ ಅಗ್ನಿ ಅವಘಡ ; ಉಡುಪಿ ಕೃಷ್ಣ ಪ್ಯಾಲೆಸ್‌ಗೆ ಬೆಂಕಿಗಾಹುತಿ..!

Mon, Dec 29, 2025

ವಿಜಯಪುರ : ನಗರದ ಸೋಲಾಪುರ ರಸ್ತೆಯಲ್ಲಿರುವ ಉಡುಪಿ ಕೃಷ್ಣ ಪ್ಯಾಲೆಸ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಘಟನೆ ತಡರಾತ್ರಿ ನಡೆದಿದೆ...


ಹೌದು ಮೂರು ಅಂತಸ್ತಿನ ಈ ಹೊಟೆಲ್‌ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು ಬೆಂಕಿ ತಗುಲಿ ಕೆಲವೇ ನಿಮಿಷಗಳಲ್ಲಿ ಹೊಟೆಲ್ ಸುಟ್ಟು ಕರಕಲಾಗಿದೆ .. ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ , ಪ್ರಾಥಮಿಕ ಮಾಹಿತಿಯಂತೆ ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದ್ದು , ಬೆಂಕಿ ಅವಘಡದಿಂದ ಉಂಟಾದ ನಷ್ಟದ ಅಂದಾಜು ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೆಚ್ಚಿನ ತನಿಖೆ ಮುಂದುವರಿದಿದ್ದು ಆದರ್ಶ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ...

Like our news?