ವಿಜಯಪುರ : ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ವಿರೋಧಿಸಿ ೧೦೭ ದಿನಗಳ ಪ್ರತಿಭಟನೆಗೆ ರಾಜ್ಯ ಸರ್ಕಾರ ಮನಿದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಸಂಭ್ರಮಾಚರಣೆ ನಡೆಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು...
ಹೌದು ವಿಜಯಪುರ ನಗರದಲ್ಲಿ ಕಳೆದ ೧೦೭ ದಿನಗಳ ಕಾಲ ಪಕ್ಷಾತೀತವಾಗಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಲವಾರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿತ್ತು ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ತಳಹದಿಯಿಂದ ಹೋರಾಟದಲ್ಲಿ ಪಾಲ್ಗೊಂಡು ಪ್ರಮುಖ ಪಾತ್ರವಹಿಸಿತ್ತು ನಿನ್ನೆಯ ದಿನ ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ ಅಷ್ಟೇ ಅಲ್ಲ ರಾಜ್ಯಾದ್ಯಂತ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡ್ತೇವೆ ಎಂದು ಘೋಷಿಸಿದರು ಈ ಬೆನ್ನಲ್ಲೇ ದಲಿತ ವಿದ್ಯಾರ್ಥಿ ಪರಿಷತ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು....
Sign up here to get the latest post directly to your inbox.