ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಹೃದಯಾಘಾತದಿಂದ ಲಿಂಗೈಕ್ಯ.!

Thu, Jan 15, 2026

ರಾಯಚೂರು : ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49)ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ.


ಹೌದು ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾಗಿದ್ದಾರೆ...

ಸ್ವಾಮಿಜಿಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ...

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ಹೃದಯಾಘಾತದಿಂದ ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ನುಡಿ ನಮನ ಸಲ್ಲಿಸಿದ್ದಾರೆ...

Like our news?