ಮುಂಬೈ : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಳಿಯುವ ಪ್ರಯತ್ನದ ವೇಳೆ ಅಪಘಾತವಾಗಿ ಅಜಿತ್ ಪವಾರ್ ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ...
ಮುಂಬೈನಿಂದ ಬೆಳಿಗ್ಗೆ ಸುಮಾರು 8 ಗಂಟೆಗೆ ಹೊರಟಿದ್ದ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಲ್ಯಾಂಡ್ ಆಗುವ ವೇಳೆ ಪತನಗೊಂಡಿದೆ...
ಸ್ಥಳೀಯ ಸಂಸ್ಥೆ ಚುನಾವಣೆಯ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಅವರು ಬಾರಾಮತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಯೋಜನೆ ರೂಪಿಸಿದ್ದರು. ಈ ದುರಂತದಿಂದ ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದ್ದು , ವಿಮಾನ ಅಪಘಾತಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ..!
Advertisement.
Sign up here to get the latest post directly to your inbox.